ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ವಿಭಿನ್ನ ಮಾದರಿಯಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪರೀಕ್ಷೆ ಇಲ್ಲದೆ ಯಾವ ರೀತಿ ಗ್ರೇಡ್ ಕೊಡಬೇಕು ಎಂದು ಬಹಳ ಯೋಚಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಮಕ್ಕಳ ಯೋಗಕ್ಷೇಮ ಮತ್ತು ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದ್ದರೆ. ಎಸ್ಸೆಸ್ಸೆಎಲ್ಸಿ, ಪಿಯುಸಿ ಪರೀಕ್ಷೆ ಈ ವರ್ಷ ಬಹುಚರ್ಚಿತ ವಿಚಾರ . ಕಳೆದ ವರ್ಷ ಪರಿಸ್ಥಿತಿ ಬೇರೆ ಇತ್ತು. ಹೇಗೋ ಮುಂಜಾಗ್ರತೆ ತೆಗೆದುಕೊಂಡು ಪರೀಕ್ಷೆ ನಡೆಸಿದ್ದೆವು. 

ಈ ವರ್ಷ 2ನೇ ಅಲೆ ಇರುವುದರಿಂದ ಪರಿಸ್ಥಿತಿ ಇದೆ. ಒಂದು ವರ್ಗ ಪರೀಕ್ಷೆ ನಡೆಸಬೇಕು ಎಂದರೆ ಕೆಲವರು ಬೇಡ ಎನ್ನುತ್ತಿದ್ದಾರೆ. ಹೀಗಾಗಿ, ಬಿಇಓಗಳ ಮೂಲಕ ಮಕ್ಕಳು ಮತ್ತು ಪೋಷಕರ ಅಭಿಪ್ರಾಯ ಪಡೆದಿದ್ದೆವೆ. ಈ ವರ್ಷವೂ ಪರೀಕ್ಷೆಗೆ ತಯಾರಿ ನಡೆಸಿದ್ದೆವು. ಆದರೆ, ಕಳೆದ ಮೂರು ದಿನಗಳಿಮದ ಈ ನಿರ್ಧರ ಮರುಪರಿಶೀಲನೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಶಿಕ್ಷಣ ತಜ್ಞರ ಅಭಿಪ್ರಾಯ ಸಹ ಪಡೆದಿದ್ದೇನೆ ಎಂದು ಹೇಳಿದರು.

ಗ್ರೇಡಿಂಗ್: ‘ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಶುಕ್ರವಾರ ತಿಳಿಸಿದರು. ವಿದ್ಯಾರ್ಥಿಗಳಿಗೆ ಎ, ಎ+, ಬಿ, ಬಿ+ ಎಂಬಂತೆ ಗ್ರೇಡ್‌ ನೀಡಲಾಗುವುದು. ಯಾವುದೇ ವಿದ್ಯಾರ್ಥಿ ತನಗೆ ಸಿಕ್ಕ ಗ್ರೇಡ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ, ತೃಪ್ತಿ ಇಲ್ಲ ಎಂದರೆ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಬಿಕ್ಕಟ್ಟು ಮುಗಿದ ನಂತರ.

ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಲ್ಲ: ಎಸ್​ಎಸ್​ಎಲ್​ಸಿ ಮಕ್ಕಳನ್ನು ಕಳೆದ ವರ್ಷದ ಆಧಾರದ ಮೇಲೆ ಪಾಸ್​ ಮಾಡೋಣವೆಂದರೆ ಕಳೆದ ಬಾರಿ 9ನೇ ತರಗತಿ ಪರೀಕ್ಷೆಯೂ ನಡೆದಿಲ್ಲ. ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ, ಎಸ್​ಎಸ್​ಎಲ್​ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಿಲ್ಲ. ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದಾರೆಂದು ಹೇಳಿದ್ದಾರೆ. 

ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಈ ಮೂರು ವಿಷಯಗಳನ್ನು ಸೇರಿಸಿ ಒಂದು ಪೇಪರ್ ನೀಡಲಾಗುತ್ತದೆ​, ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳು ಸರಳ ಹಾಗೂ ನೇರವಾಗಿರಲಿದ್ದು, ವಿದ್ಯಾರ್ಥಿಗಳು ಆತಂಕಪಡುವ ಆಗತ್ಯವಿಲ್ಲ. ಇದೇ ರೀತಿ ಇನ್ನೊಂದು ಪತ್ರಿಕೆ ಭಾಷಾ ವಿಷಯಗಳು ಇರಲಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!