ಉಡುಪಿ: 561 ಮಂದಿಯಲ್ಲಿ ಪಾಸಿಟಿವ್, ಮೂವರ ಸಾವು, 585 ಗುಣಮುಖ

ಉಡುಪಿ ಜೂ.4(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆ ಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 561 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 227, ಕುಂದಾಪುರ 226, ಕಾರ್ಕಳ 106 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ  ಸೋಂಕು ಇರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ 4506 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 

ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಓರ್ವ ವ್ಯಕ್ತಿ, ಕಾರ್ಕಳದ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಜೂ.3 ರಂದು ಜಿಲ್ಲೆಯಲ್ಲಿ 585 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 56392 ಮಂದಿ ಗುಣಮುಖರಾಗಿದ್ದಾರೆ.

ಜೂ.3 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,05390 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 61,239 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 341 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ಪೈಕಿ ಉಡುಪಿಯಲ್ಲಿ 3, ಕುಂದಾಪುರದಲ್ಲಿ 3 ಹಾಗೂ ಹೊರ ಜಿಲ್ಲೆಯ 10 ಮಂದಿಯಲ್ಲಿ ಈ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ 5 ಮಂದಿ ಫಂಗಸ್ ನಿಂದ ಗುಣಮುಖ ರಾಗಿದ್ದಾರೆ. ಹಾಗೂ ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು16 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!