ಉಡುಪಿ ಜೂ.4(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಗಳು ಕಾರ್ಯ ನಿರ್ವಹಿಸಲು ಸಮಯವನ್ನು ನಿಗದಿ ಪಡಿಸಿದ ಅವಧಿಯನ್ನು ಜೂ.14 ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಜೂ.7 ರಂದು ಮುಕ್ತಾಯಗೊಳ್ಳುತ್ತಿದೆ. ಈ ಲಾಕ್ ಡೌನ್ ನನ್ನು ಜೂ.14 ರ ವರೆಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. ವಿಸ್ತರಿಸಿದ ನಿರ್ಬಂಧದ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಮಾಡಲು ಅನುಕೂಲ ಮಾಡಿಕೊಡುವುದು ಅವಶ್ಯಕವೆಂದು ಕಂಡುಬಂದಿದ್ದು, ಅದೇ ವೇಳೆಯಲ್ಲಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪ್ರಸ್ತುತ ಮಾರ್ಪಡಿಸಿ ಹೊರಡಿಸಿರುವ ಬ್ಯಾಂಕುಗಳ ಕಾರ್ಯಾಚರಣೆಯ ಅವಧಿಯನ್ನು ಯಥಾ ಸಮಯಲ್ಲಿ ಮುಂದುವರೆಸುವುದು ಸೂಕ್ತವೆಂದು ಮನಗಂಡು ಆದೇಶ ಹೊರಡಿಸಿದ್ದಾರೆ.
ಅದರಂತೆ ಸರ್ಕಾರದ ಮಾರ್ಗಸೂಚಿಯನ್ವಯ, ಕೋವಿಡ್-19ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವದರೊಂದಿಗೆ, ಜೂ.7 ರಿಂದ ಜೂ.14 ರ ವರಗೆ ವ್ಯವಹಾರ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಕೆಲಸದ ಸಮಯ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.
| | |