ಉಡುಪಿ: ಜೂ.5ರ ಕೋವಿಡ್ ಲಸಿಕೆ ಲಭ್ಯತೆಯ ಮಾಹಿತಿ

ಉಡುಪಿ ಜೂ.4(ಉಡುಪಿ ಟೈಮ್ಸ್ ವರದಿ)ಜಿಲ್ಲೆಯಲ್ಲಿ ಜೂ.5 ರಂದು ಕೊರೋನಾ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ಲಭ್ಯತೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ  ಜಿಲ್ಲೆಯಲ್ಲಿ ನಾಳೆ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಉಳಿದಂತೆ ಕೋವಿಶೀಲ್ಡ್ ಲಸಿಕೆ ಯ ಪ್ರಥಮ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)-200 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿಯಲ್ಲಿ)- 250 ಡೋಸ್ ಹಾಗೂ ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ,  ಇಂದಿರಾನಗರ)-150 ಡೋಸ್ ಲಭ್ಯವಿರಲಿದೆ. 

ಕೋವಿಶೀಲ್ಡ್ 2 ನೇ ಡೋಸ್ ಪಡೆಯುವ 45 ವರ್ಷ ಮೇಲ್ಪಟ್ಟ  ಸಾರ್ವಜನಿಕರಿಗೆ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ  ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 50 ಡೋಸ್ ಕೋವ್ಯಾಕ್ಸಿನ್ 2 ನೇ ಡೋಸ್  ಲಸಿಕೆ ಪಡೆಯುವ ಉಡುಪಿ ನಗರ ಪ್ರದೇಶದ  ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್  ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿ 2 ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-250 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-300 ಡೋಸ್ ಲಭ್ಯವಿರುತ್ತದೆ.ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು‌ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ ೨ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂ. 5 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿ ರುತ್ತಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!