ಉಡುಪಿ: ಕೋವಿಡ್ ಸೋಂಕಿತ ಮಹಿಳೆ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಉಡುಪಿ:(ಉಡುಪಿ ಟೈಮ್ಸ್ ವರದಿ) ನಗರದ ವಸತಿ ಸಮುಚ್ಚಯವೊಂದರಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತ ಮಹಿಳೆಯೊರ್ವರು ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಗರದ ಜೊಡುಕಟ್ಟೆಯ ಜನಾರ್ಧನ್ ಟವರ್‌ನ ನಿವಾಸಿ ಗಂಗಮ್ಮ (70) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತಿಗೂ ಕೋವಿಡ್ ಪಾಸಿಟಿವ್ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೇ ವಿಚಾರದಲ್ಲಿ ನೊಂದು ತಾವು ವಾಸದ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಚಿತ್ರದುರ್ಗಾ ಮೂಲದ ಇವರು ಕಳೆದ ಕೆಲವು ಸಮಯಗಳಿಂದ ಉಡುಪಿಯಲ್ಲಿ ನೆಲೆಸಿದ್ದು, ಮೃತರ ಪುತ್ರ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ವ್ಯವಸ್ಥಾಪಕರಾಗಿದ್ದಾರೆ.