| ಉಡುಪಿ ಜೂ.5(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ ಯಾಗುತ್ತಿರುವ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 552 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಪೈಕಿ ಉಡುಪಿಯಲ್ಲಿ 208, ಕುಂದಾಪುರ 139, ಕಾರ್ಕಳ 197ಹಾಗೂ ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ 4323 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಉಡುಪಿಯ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.4 ರಂದು ಜಿಲ್ಲೆಯಲ್ಲಿ 734 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 57,126 ಮಂದಿ ಗುಣಮುಖರಾಗಿದ್ದಾರೆ.
ಜೂ.4 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,09,171 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 61791 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 342 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರದಲ್ಲಿ 3 ಹಾಗೂ ಹೊರ ಜಿಲ್ಲೆಯ 10 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 5 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 16 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| |