ಉಡುಪಿ: ಇಳಿಕೆಯತ್ತ ಕೋವಿಡ್ ಪಾಸಿಟಿವ್ ಪ್ರಕರಣ, 38 ವರ್ಷದ ವ್ಯಕ್ತಿ ಸಹಿತ ಇಬ್ಬರ ಮೃತ್ಯು
ಉಡುಪಿ ಜೂ.6(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿದೆ. ಇದರಿಂದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯು ಇಳಿಮುಖವಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 494 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ123, ಕುಂದಾಪುರ 191, ಕಾರ್ಕಳ 178 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 4321 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಉಡುಪಿಯ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.5 ರಂದು ಜಿಲ್ಲೆಯಲ್ಲಿ 494 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 57620 ಮಂದಿ ಗುಣಮುಖರಾಗಿದ್ದಾರೆ.
ಜೂ.5 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,13,248 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 62,285 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 344 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 10 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರ 3 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 5 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 17 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.