ಉಡುಪಿ: ಜೂ.7 ರ ಕೋವಿಡ್ ಲಸಿಕೆಯ ಬಗ್ಗೆ ಮಾಹಿತಿ
ಉಡುಪಿ ಜೂ.6(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಜೂ.7 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಲಭ್ಯವಿರುವ ಕೋವಿಡ್ ಲಸಿಕೆಯ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಜೂ.7 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯ ವಿರುವುದಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಪ್ರಥಮ ಮತ್ತು 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿಕಾರ್ಯಕರ್ತರಿಗೆ) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ ) 250 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) 150 ಡೋಸ್ ಲಸಿಕೆ ಲಭ್ಯ ವಿದ್ದುಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಲಸಿಕೆ ವಿತರಣೆ ನಡೆಯಲಿದೆ.
ಪ್ರಥಮ ಕೋವಿಶೀಲ್ಡ್ ಡೋಸ್ ಲಸಿಕೆ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿ ಯಲ್ಲಿ) 200 ಡೋಸ್, ಎಫ್.ಪಿ.ಎ.ಐ. ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ)150 ಡೋಸ್, ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-150 ಡೋಸ್ ಲಭ್ಯವಿದ್ದು ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಲಸಿಕೆ ವಿತರಣೆ ನಡೆಯಲಿದೆ.
ಇನ್ನು ಕೋವ್ಯಾಕ್ಸಿನ್ 2 ನೇ ಡೋಸ್ ಲಸಿಕೆ ಪಡೆಯುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, HCW/ FLW( ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿಯಲ್ಲಿ-150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪ ಶಾಲೆ) 250 ಡೋಸ್ಬಳಿಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಲಸಿಕೆ ವಿತರಣೆ ನಡೆಯಲಿದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು /HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿ ಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂ.7 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.
ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.