ಉಡುಪಿ: ಗಣನೀಯ ಇಳಿಕೆಯತ್ತ ಕೋವಿಡ್ ಪಾಸಿಟಿವ್ ಪ್ರಕರಣ- ಇಬ್ಬರ ಮೃತ್ಯು

ಉಡುಪಿ ಜೂ.7(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಇಂದು 394 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಪೈಕಿ ಉಡುಪಿಯಲ್ಲಿ 207, ಕುಂದಾಪುರ 110, ಕಾರ್ಕಳ 70 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಇರುವುದು ಪತ್ತೆ ಯಾಗಿದೆ. ಸದ್ಯ ಜಿಲ್ಲೆಯಲ್ಲಿ 4085 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಕುಂದಾಪುರದ 61 ವರ್ಷದ ಓರ್ವ ವ್ಯಕ್ತಿ ಹಾಗೂ 85 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಜೂ. 6 ರಂದು ಜಿಲ್ಲೆಯಲ್ಲಿ 628 ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 58,248  ಮಂದಿ ಗುಣಮುಖರಾಗಿದ್ದಾರೆ. ಜೂ.6 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು  6,16,622 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 62,679 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 346 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 10 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 18  ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!