ಉಡುಪಿ: ಜೂ.9 ರ ಕೋವಿಡ್ ಲಸಿಕೆ ವಿತರಣೆ ಮಾಹಿತಿ

ಉಡುಪಿ ಜೂ.8(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಜೂ.9 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಲಭ್ಯವಿರುವ ಕೋವಿಡ್ ಲಸಿಕೆಯ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ನಾಳೆ ಅಂದರೆ ಜೂ.9 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್ ಪಡೆಯುವ  45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, HCW/FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) 200 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪ ಶಾಲೆ) 100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ( ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಅಂಬಲಪಾಡಿಯಲ್ಲಿ)50 ಡೋಸ್ ಲಸಿಕೆ ಲಭ್ಯವಿರಲಿದೆ.

ಪ್ರಥಮ ಕೋವಿಶೀಲ್ಡ್ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ 1 ರಲ್ಲಿರುವ  ಕೊರೋನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳಿಗೆ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ( ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿಯಲ್ಲಿ ) 150 ಡೋಸ್, ಎಫ್.ಪಿ.ಎ.ಐ. ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ)50 ಡೋಸ್ ಲಸಿಕೆ ಲಭ್ಯವಿರಲಿದೆ.

2 ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, HCW/ FLW( ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪ ಶಾಲೆ) 50 ಡೋಸ್ , ಎಫ್.ಪಿ.ಎ.ಐ. ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ)50 ಡೋಸ್ ಲಸಿಕೆ ಲಭ್ಯವಿರಲಿದೆ. 

ಕೋವ್ಯಾಕ್ಸಿನ್ 2 ನೇ ಡೋಸ್ ಲಸಿಕೆ ಪಡೆಯುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, HCW/ FLW( ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ -100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ( ಖಾಸಗಿ ಆಗ್ಲ ಮಾಧ್ಯಮ ಶಾಲೆ ಅಂಬಲಪಾಡಿಯಲ್ಲಿ)100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪ ಶಾಲೆ) 100 ಡೋಸ್ ಲಸಿಕೆ ಲಭ್ಯವಿರಲಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿ ರುವ ಅನುಬಂಧ 1 ರಲ್ಲಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ, ಆಶಾಕಾರ್ಯಕರ್ತೆ ಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು  ಜೂ.9 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!