| ಉಡುಪಿ ಜೂ.8(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಪ್ರತಿದಿನ ಪತ್ತೆಯಾಗಿವ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಉಡುಪಿ, ಕುಂದಾಪುರ ಹಾಗೂ ಕಾರ್ಕಳದಲ್ಲಿ ಮೂರಂಕಿಯಲ್ಲಿ ಪತ್ತೆಯಾಗುತ್ತಿದ್ದ ಪ್ರಕರಣಗಳು ಇಂದು ಎರಡಂಕಿಗೆ ಇಳಿದಿದೆ.
ಜಿಲ್ಲೆಯಲ್ಲಿ ಇಂದು 204 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 95, ಕುಂದಾಪುರ 49, ಕಾರ್ಕಳ 51 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3783 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕುಂದಾಪುರದ 23 ವರ್ಷದ ಓರ್ವ ಯುವತಿ ಹಾಗೂ ಉಡುಪಿಯ 75 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.7 ರಂದು ಜಿಲ್ಲೆಯಲ್ಲಿ 504ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 58,752 ಮಂದಿ ಗುಣಮುಖರಾಗಿದ್ದಾರೆ.
ಜೂ.7 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,19,238 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 62,883 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 348 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 10 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರದಲ್ಲಿ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 18 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| |