ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯ ದರ ಪ್ರಕಟ- ಹೆಚ್ಚು ದರ ಪಡೆದರೆ ಕಠಿಣ ಕ್ರಮ: ಕೇಂದ್ರ ಸರ್ಕಾರ ಎಚ್ಚರಿಕೆ
ನವದೆಹಲಿ: ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳು ಗರಿಷ್ಠ ₹150 ಸೇವಾ ಶುಲ್ಕ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಸೋಮವಾರ ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದರು. ಜತೆಗೆ, ಲಸಿಕೆ ನೀಡಿಕೆಗೆ ಖಾಸಗಿ ಆಸ್ಪತ್ರೆಗಳು ಪಡೆಯುವ ಶುಲ್ಕವನ್ನು ಪರಿಷ್ಕರಿಸಿ ಘೋಷಣೆ ಮಾಡಿದ್ದರು
ಕೋವಿಶೀಲ್ಡ್ – ₹780, ಕೊವ್ಯಾಕ್ಸಿನ್ – ₹1,410 ಸ್ಪುಟ್ನಿಕ್ ವಿ – ₹1,145 ಹೆಚ್ಚು ದರ ವಸೂಲಿ ಮಾಡಿದರೆ ಕಠಿಣ ಕ್ರಮ
ಪರಿಷ್ಕೃತ ದರಕ್ಕೆ ಸಂಬಂಧಿಸಿ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದ್ದು, ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ಪಡೆದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ವಿವಿಧ ಖಾಸಗಿ ಆಸ್ಪತ್ರೆಗಳ ದರ ಗರಿಷ್ಠ ಮಿತಿಯನ್ನು ಮೀರದಂತೆ ನೋಡಿಕೊಳ್ಳಬೇಕೆಂದೂ ಆರೋಗ್ಯ ಸಚಿವಾಲಯ ಹೇಳಿದೆ.
ಖಾಸಗಿ ಆಸ್ಪತ್ರೆಗಳು ಗರಿಷ್ಠ ₹150 ಸೇವಾ ಶುಲ್ಕ ಪಡೆಯಬಹುದು. ಈ ರೀತಿ ವಿಧಿಸಲಾಗುವ ಬೆಲೆಯ ಬಗ್ಗೆ ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ನಡೆಸಬಹುದು ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.