ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಮೇಸ್ತ್ರಿ- ಕೇಬಲ್ ತುಂಡಾಗಿ ಕುಸಿದು ರಕ್ತಸ್ರಾವದಿಂದ ಮೃತ್ಯು

ಹೆಬ್ರಿ ಜೂ.9(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ  ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಮಂಜುನಾಥ ನಾಯ್ಕ (48) ಮೃತಪಟ್ಟವರು. ಇವರು, ಗಾರೆ ಕೆಲಸವನ್ನು ಮಾಡಿಕೊಂಡಿದ್ದು ವಿಪರೀತ ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದರು. ಇವರು ತಮ್ಮ ವಿಪರೀತ ಮದ್ಯಪಾನದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೂ.8 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳಲು ಬಳಸಿದ್ದ ಕೇಬಲ್ ವಯರ್ ತುಂಡಾದ ಪರಿಣಾದ ಅವರು ನೆಲದ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಲೆಗೆ ಬಲವಾದ ಗಾಯವಾದ ಕಾರಣ ತೀವ್ರ ರಕ್ತ ಸ್ರಾವದಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!