ಜೂ.9- ಮತ್ತೆ ಏರಿಕೆ ಕಂಡ ಕೋವಿಡ್ ಪಾಸಿಟಿವ್ ಪ್ರಕರಣ: ಉಡುಪಿಯ ಮೂವರ ಸಾವು

ಉಡುಪಿ ಜೂ.9(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಇಂದು 409 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಪೈಕಿ ಉಡುಪಿಯಲ್ಲಿ 175, ಕುಂದಾಪುರ 123, ಕಾರ್ಕಳ 107 ಹಾಗೂ ಹೊರ ಜಿಲ್ಲೆಯ  4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3766 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 

ಇಂದು ಜಿಲ್ಲೆಯಲ್ಲಿ ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.8 ರಂದು ಜಿಲ್ಲೆಯಲ್ಲಿ 423 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರಬಂದಿದ್ದು, ಈ ವರೆಗೆ ಒಟ್ಟು 59,175  ಮಂದಿ ಗುಣಮುಖ ರಾಗಿದ್ದಾರೆ.

ಜೂ.8 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,22,686 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 63,292 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 351 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 9 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 8 ಮಂದಿ  ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 19 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!