ಗಡ್ಡ ತೆಗೆಯಲು ಪ್ರಧಾನಿ ಮೋದಿಗೆ 100 ರೂ. ಕಳುಹಿಸಿ, ಪತ್ರ ಬರೆದ ಟೀ ಮಾರಾಟಗಾರ!

ಮುಂಬೈ: ಮಹಾರಾಷ್ಟ್ರದ ಬಾರಾಮತಿಯ ಟೀ ಮಾರಾಟಗಾರರೋರ್ವರು ಪ್ರಧಾನಿ ನರೇಂದ್ರ ಮೋದಿಗೆ ಗಡ್ಡ ತೆಗೆಯುವುದಕ್ಕೆ 100 ರೂಪಾಯಿ ಕಳಿಸಿಕೊಟ್ಟಿದ್ದು, ತಮ್ಮ ಮನದ ಮಾತನ್ನು ಪತ್ರ ಮುಖೇನ ತಿಳಿಸಿದ್ದಾರೆ. 

ಕಳೆದ ಒಂದೂವರೆ ವರ್ಷದಲ್ಲಿ ಕೊರೋನಾ, ಲಾಕ್ ಡೌನ್ ನಿಂದ ಅಸಂಘಟಿತ ವಲಯ ತೀವ್ರವಾಗಿ ಕುಸಿತ ಕಂಡಿದೆ. ಇದರಿಂದ ತೀವ್ರವಾಗಿ ಬೇಸತ್ತ ಟೀ ವ್ಯಾಪಾರಿ ಅನಿಲ್ ಮೋರೆ, ಪ್ರಧಾನಿಗೆ ಪತ್ರ ಬರೆದಿದ್ದು, ಪ್ರಧಾನಿ ಗಡ್ಡ ಬೆಳೆಸಿದ್ದಾರೆ. ಆದರೆ ಏನನ್ನಾದರೂ ಬೆಳೆಸುವುದಾದರೆ ದೇಶದ ಜನತೆಗೆ ಉದ್ಯೋಗಾವಕಾಶಗಳನ್ನು ಬೆಳೆಸಿ, ಲಸಿಕೆಯನ್ನು ಹೆಚ್ಚಿಸಿ, ಈಗಿರುವ ವೈದ್ಯಕೀಯ ಸೌಲಭ್ಯ ಗಳನ್ನು ಏರಿಕೆ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. 

ಕಳೆದ 2 ಲಾಕ್ ಡೌನ್ ಗಳಿಂದ ಕಂಗೆಟ್ಟಿರುವ ಜನತೆಯ ಸಮಸ್ಯೆಗಳು ನಿವಾರಣೆಯಾಗುವುದನ್ನು ಪ್ರಧಾನಿ ಮೋದಿ ಖಾತ್ರಿಪಡಿಸಿ ಕೊಳ್ಳಬೇಕು ಎಂದು ಟೀ ಮಾರಾಟ ಮಾಡುವ ಅನಿಲ್ ಮೋರೆ ಅಭಿಪ್ರಾಯಪಟ್ಟಿದ್ದಾರೆ. 

ಪ್ರಧಾನಿಗಳ ಹುದ್ದೆ ದೇಶದ ಅತ್ಯುನ್ನತ ಹುದ್ದೆಯಾಗಿದೆ. ಪ್ರಧಾನಿಗಳ ಬಗ್ಗೆ ಅವರ ಆಡಳಿತದ ಬಗ್ಗೆ ಗೌರವವಿದೆ. ನನ್ನ ಉಳಿತಾ ಯದ ಹಣದಿಂದ 100 ರೂಪಾಯಿಗಳನ್ನು ನಾನು ಅವರಿಗೆ ಗಡ್ಡ ತೆಗೆಸಿಕೊಳ್ಳುವುದಕ್ಕಾಗಿ ಕಳಿಸುತ್ತಿದ್ದೇನೆ. ಅವರು ಅತ್ಯುನ್ನತ ನಾಯಕ ಅವರಿಗೆ ಅವಮಾನ ಮಾಡುವುದು ನನ್ನ ಉದ್ದೇಶವಲ್ಲ. ದೇಶದ ಬಡ ಜನತೆ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಅವರ ಗಮನ ಸೆಳೆಯುವುದಕ್ಕಾಗಿ ಈ ರೀತಿ ಮಾಡಿದ್ದೇನೆ” ಎಂದು ಅನಿಲ್ ಮೋರೆ ತಿಳಿಸಿದ್ದಾರೆ. 

ಕೋವಿಡ್-19 ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ಹಾಗೂ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವವರಿಗೆ 30,000 ರೂಪಾಯಿಗಳನ್ನು ನೀಡುವುದಕ್ಕೆ ಪ್ರಧಾನಿಗಳಿಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದೇನೆ ಎಂದು ಅನಿಲ್ ಮೋರೆ ಹೇಳಿದ್ದಾರೆ

1 thought on “ಗಡ್ಡ ತೆಗೆಯಲು ಪ್ರಧಾನಿ ಮೋದಿಗೆ 100 ರೂ. ಕಳುಹಿಸಿ, ಪತ್ರ ಬರೆದ ಟೀ ಮಾರಾಟಗಾರ!

  1. complete shave madidru thondrene.
    ella kastadalli iddare, pandamic ide, kelas illa, arthikathe kusidide.
    But namma PM na nodi, clean shave madkondu yarige en bekadru aagli anta thirugthiddare.

Leave a Reply

Your email address will not be published. Required fields are marked *

error: Content is protected !!