ಉಡುಪಿ ಕರಾವಳಿ ಭದ್ರತಾ ಪಡೆಯ ಎಸ್ಪಿ ಸಹಿತ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳ ಎಂಬ ವಿವರ :

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ. ಡಿ. ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಉಡುಪಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿ ಆರ್. ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಎಸ್‍ಪಿ ಸಿ. ಬಿ. ರಿಷ್ಯಂತ್ ಅವರನ್ನು ದಾವಣಗೆರೆ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೋಲಾರ ಎಸ್‍. ಪಿ. ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರಿನ ವೈರ್‌ಲೆಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ಎಸ್‍ಪಿ ಹನುಮಂತರಾಯ ಅವರನ್ನು ಹಾವೇರಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ದೆಕ್ಕಾ ಕಿಶೋರ್ ಬಾಬು ಅವರನ್ನು ಕೋಲಾರ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ತುಮಕೂರು ಎಸ್‍ಪಿಯಾಗಿದ್ದ ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಆಂತರಿಕ ಭದ್ರತಾ ಪಡೆಯ ಎಸ್‍ಪಿಯಾಗಿದ್ದ ಪ್ರದೀಪ್ ಗುಂಟಿ ಅವರನ್ನು ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ವೈರ್‌ಲೆಸ್ ವಿಭಾಗದ ಎಸ್‍ಪಿಯಾಗಿದ್ದ ಅದ್ದೂರು ಶ್ರೀನಿವಾಸುಲು ಅವರನ್ನು ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಪ್ರಕಾಶ್ ಗೌಡ ಅವರನ್ನು ಆಂತರಿಕ ಭದ್ರತಾ ಪಡೆ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಎಸ್‍ಪಿ ಕೆ. ಜಿ. ದೇವರಾಜು ಅವರನ್ನು ಸಿಐಡಿ ಎಸ್‍ಪಿಯಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. 

Leave a Reply

Your email address will not be published. Required fields are marked *

error: Content is protected !!