ಮಂಗಳೂರು: ಮಹಿಳೆಯೊಬ್ಬರು 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!

ಮಂಗಳೂರು ಜೂ.10 (ಉಡುಪಿ ಟೈಮ್ಸ್ ವರದಿ): ಮಹಿಳೆಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮೃತರನ್ನು ಪುಷ್ಪಲತಾ (64) ಎಂದು ಗುರುತಿಸಲಾಗಿದೆ. ಕುಲಶೇಖರ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು 14 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಇವರು ಈ ಹಿಂದೆಯೂ ಆತ್ಮಹತ್ಯೆ ಯತ್ನ ನಡೆಸಿದ್ದರು. ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!