ಉಡುಪಿ: ಜೂ.11 ಕೋವಿಡ್ ಲಸಿಕೆ ಲಭ್ಯತೆ ವಿವರ
ಉಡುಪಿ ಜೂ.10(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ(ಕೇಂದ್ರಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ,ಮಣಿಪಾಲ)-150 ಡೋಸ್, ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ, ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ)- 200 ಡೋಸ್, ನಗರ ಪ್ರಾಥಮಿಕ ಆರೋಗ್ಯ ಉಡುಪಿಯ ಹಳೆ ಕಟ್ಟಡ(ಅಲಂಕಾರ್ ಥಿಯೇಟರ್ ಹತ್ತಿರ)-150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-200 ಡೋಸ್, ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್ ನೀಡಲಾಗುತ್ತದೆ.
2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-100 ಡೋಸ್ ನೀಡಲಾಗುವುದು.
ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ (ಪ್ರಥಮಡೋಸ್ ಲಸಿಕೆಪಡೆದು 4ವಾರ ಮೀರಿದವರಿಗೆ) 45ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ)ಸರಕಾರಿ ತಾಯಿ ಮತ್ತು ಮಕ್ಕಳ(ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ಯಲ್ಲಿ -150 ಡೋಸ್ , ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-100 ಡೋಸ್ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು (ಕೇಂದ್ರ ಸರಕಾರ ಗುರುತಿ ಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು (ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ ಮೀರಿದವರು) ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 11.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರು ತ್ತಾರೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಡಿಹೆಚ್‌ಓ ಕಚೇರಿ ಪ್ರಕಟಣೆ ತಿಳಿಸಿದೆ.