ಉಡುಪಿ: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಮುಖದತ್ತ
ಉಡುಪಿ ಜೂ.11(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಮುಖವಾಗುತ್ತಿದೆ ಜಿಲ್ಲೆಯಲ್ಲಿ ಇಂದು 215 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 85, ಕುಂದಾಪುರ 80, ಕಾರ್ಕಳ 49 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3717 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕಾರ್ಕಳದ 72 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.10 ರಂದು ಜಿಲ್ಲೆಯಲ್ಲಿ 309 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 59,725 ಮಂದಿ ಗುಣಮುಖರಾಗಿದ್ದಾರೆ.
ಜೂ.10ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,29,699 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 63,796 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 354 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 5 ಹಾಗೂ ಹೊರ ಜಿಲ್ಲೆಯ 12ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 12 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 21 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.