ಉಡುಪಿ, ದ.ಕ, ಉ.ಕ: ಜೂ.12-16 ವರೆಗೆ ‘ಆರೆಂಜ್ ಅಲರ್ಟ್’- ಗುಡುಗು ಸಿಡಿಲು ಸಹಿತ ಭಾರೀ ಮಳೆಯ ಎಚ್ಚರಿಕೆ
ಬೆಂಗಳೂರು ಜೂ.12: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಿಲು ಸಹಿತ ಭಾರೀ ಮಳೆ ಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡದೆ.
ಇನ್ನು ಜೂ. 12ರ ಬೆಳಗ್ಗೆ 8.30ರಿಂದ ಜೂ. 16ರಂದು ಬೆಳಗ್ಗೆ 8.30ರವರೆಗೆ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಮಳೆಯ ಜತೆ ಗಾಳಿ ಮತ್ತು ಸಿಡಿಲು ಕೂಡ ಇರಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ನೀಡಿದೆ.