ದ.ಕ ಜಿಲ್ಲೆಯ 40 ಗ್ರಾಮ, ಉಳ್ಳಾಲ, ಸೋಮೇಶ್ವರ, ಕೋಟೆಕಾರು,ಬೆಳ್ತಂಗಡಿ ನಗರ ಪ್ರದೇಶ ಸಂಪೂರ್ಣ ಲಾಕ್ ಡೌನ್ ?
ಮಂಗಳೂರು, ಜೂ 12: ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ 40 ಗ್ರಾಮಗಳಲ್ಲಿ ಹಾಗೂ ನಾಲ್ಕು ನಗರ ಪ್ರದೇಶಗಳಲ್ಲಿ ಕೊವೀಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಏರಿಕೆಯಾದ ಈ ಪ್ರದೇಶಗಳನ್ನು ಜಿಲ್ಲಾಡಳಿತವೂ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕೊವೀಡ್ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಹಾಗೂ ಲಾಕ್ ಡೌನ್ ಅವಧಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣವೂ ಜಿಲ್ಲೆಯ 40 ಗ್ರಾಮಗಳಲ್ಲಿ ಹಾಗೂ 4 ನಗರ ಪ್ರದೇಶಗಳಾದ ಉಳ್ಳಾಲ, ಸೋಮೇಶ್ವರ, ಕೋಟೆಕಾರು, ಬೆಳ್ತಂಗಡಿಯ ನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವ ಪ್ರಸ್ತಾವನೆಯನ್ನು ಆಧರಿಸಿ ಪೂರ್ಣಪ್ರಮಾಣದಲ್ಲಿ ವಿಧಿಸಲು ಆದೇಶಿಸ ಲಾಗುವುದು ಎಂದಿದ್ದಾರೆ.
ಮಾತ್ರವಲ್ಲದೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಜೂನ್ 21 ರವರೆಗೆ ಮುಂದುವರಿಸಲಾಗಿದೆ. ಈ ವೇಳೆ ಬ್ಯಾಂಕಿಂಗ್ ಕಾರ್ಯ ಚಟುವಟಿಕೆಳು ಬೆಳಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಸಲು ಅವಕಾಶ ನೀಡಲಾಗಿದೆ. ಜೊತೆಗೆ ಅಗತ್ಯ ವಸ್ತುಗಳ ಖರೀದಿಗೆ ಎಂದಿನಂತೆ ಅವಕಾಶವಿದೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕನ್ನಡಕ ಮಾರಾಟ ಅಂಗಡಿ ಹಾಗೂ ಅವುಗಳ ರಿಪೇರಿ ಅಂಗಡಿಗಳಿಗೆ ಗ್ಯಾರೇಜು ಹಾಗೂ ವಾಹನ ಸರ್ವಿಸ್ ಸೆಂಟರ್ ತೆರೆಯಲು ಅವಕಾಶ ನೀಡಲಾಗಿದೆ. ಇನ್ನು ವಾರಾಂತ್ಯದ ಕರ್ಪ್ಯೂ ಬಗ್ಗೆ ಯಾವುದೇ ಪ್ರತ್ಯೇಕ ನಿರ್ದೇಶನಗಳು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.