ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ಟು, ಬೇರೆನೂ ತಿಳಿದಿಲ್ಲ- ನಳಿನ್ ಕುಮಾರ್ ಕಟೀಲ್
ಪುತ್ತೂರು ಜೂ.12: ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಪಕ್ಷ ಎಲ್ಲವನ್ನು ವಿರೋಧಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಗೆ ವಿರೋಧ ಮಾಡುವುದು ಬಿಟ್ಟು, ಬೇರೆನೂ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.
ಈ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ಕಾರಣ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಬೇಕಾಗಿದೆ. ಈ ಬೆಳವಣಿಗೆ ಯಾವುದೇ ಪಕ್ಷ ಆಡಳಿತ ದಲ್ಲಿದ್ದರೂ ನಡೆದೇ ನಡೆಯುತ್ತದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿ ಯಿಂದ ಕೇಂದ್ರ ಸರಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದು ಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊದಲು ಕೋವಿಡ್ ಲಸಿಕೆಯನ್ನು ವಿರೋಧಿಸಿದ್ದ ಕಾಂಗ್ರೆಸ್ ಈಗ ಪೆಟ್ರೋಲ್ ಮತ್ತು ಡೀಸೆಲ್ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.