ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟ ಯತ್ನ, ಓರ್ವನ ಬಂಧನ

ಬೆಂಗಳೂರು: ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟಕ್ಕೆ ಯತ್ನಿಸಿದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಮ್ ಮೋಹನ್‌ ಬಂಧಿತ ಆರೋಪಿ.

ಬಂಧಿತನಿಂದ ಬ್ಲ್ಯಾಕ್ ಫಂಗಸ್​​‌‌ ಚಿಕಿತ್ಸೆ ಗೆ ನೀಡಲಾಗುತ್ತಿದ್ದ 80 ಮಾತ್ರೆ ಮತ್ತು 17 ಇಂಜೆಕ್ಷನ್​​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಆರೋಪಿ  ನಿಗದಿತ ದರಕ್ಕಿಂತ ಎರಡು ಪಟ್ಟು ಹೆಚ್ಚು ದರದಲ್ಲಿ ಮಾರಾಟ ಮಾಡುತ್ತಿದ್ದ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!