ಉಡುಪಿ: 258 ಪಾಸಿಟಿವ್, ಇಬ್ಬರ ಸಾವು- ಜೂ.13ರಂದು ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಲಸಿಕೆ ವಿತರಣೆ ಇಲ್ಲ

ಉಡುಪಿ ಜೂ.12(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಅಲ್ಲದೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಇಳಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 258 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.ಈ ಪೈಕಿ ಉಡುಪಿಯಲ್ಲಿ 133, ಕುಂದಾಪುರ 75, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3348 ಕೋವಿಡ್ ಸಕ್ರಿಯ ಪ್ರಕರಣ ಗಳಿವೆ. ಇಂದು ಜಿಲ್ಲೆಯಲ್ಲಿ ಉಡುಪಿಯ 68 ವರ್ಷದ ಓರ್ವ ಮಹಿಳೆ ಹಾಗೂ ಕುಂದಾಪುರದ 43 ವರ್ಷದ ಓರ್ವ ಮಹಿಳೆ ಸೋಂಕಿ ನಿಂದ ಮೃತಪಟ್ಟಿದ್ದಾರೆ. 

ಜೂ. 11ರಂದು ಜಿಲ್ಲೆಯಲ್ಲಿ 625 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 60,350  ಮಂದಿ ಗುಣಮುಖರಾಗಿದ್ದಾರೆ. ಜೂ.11ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,33,103 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 64,054 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 356 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 6 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4,ಕುಂದಾಪುರದಲ್ಲಿ 5 ಹಾಗೂ ಹೊರ ಜಿಲ್ಲೆಯ 13 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 14 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 22 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!