| ಉಡುಪಿ ಜೂ.13(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ ಲಭ್ಯವಿರುವ ಕೋವಿಡ್ ಲಸಿಕೆಯ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಳೆ ಅಂದರೆ ಜೂ.14 ರಂದು ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಹಾಗೂ ಉಡುಪಿ ನಗರ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಭ್ಯ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಉಳಿದಂತೆ, ಕೋವಿಶೀಲ್ಡ್ ಪ್ರಥಮ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)90 ಡೋಸ್ ನೀಡಲಾಗುತ್ತದೆ. ಹಾಗೂ 320 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಕೋವಿಶೀಲ್ಡ್ ಪ್ರಥಮ ಡೋಸ್ ಪಡೆಯುವ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿಯಲ್ಲಿ) 50 ಡೋಸ್ ನೀಡಲಾಗುವುದು ಮತ್ತು 150 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು. ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 160 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯ ವಿದ್ದು, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) 150 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು, ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ನೀಡಲಾಗುವುದು. ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 100 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯ ವಿದ್ದು, ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾಕಾರ್ಯ ಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ನಾಳೆ ಅಂದರೆ ಜೂ.14 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.
ಇನ್ನು ಕಾರ್ಕಳ ತಾಲೂಕಿನಲ್ಲಿ ನಾಳೆ ಅಂದರೆ ಜೂ.14 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಕೋವಿಶೀಲ್ಡ್ ಲಸಿಕಾ ಶಿಬಿರಗಳು ನಡೆಯಲಿದೆ. ಅದರಂತೆ ಬೆಳ್ಳಣ್ಣುವಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 70 ಡೋಸ್, ದೊಂಡೆರಂಗಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 70 ಡೋಸ್, ಹಿರ್ಗಾನದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 70 ಡೋಸ್, ಈದುವಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 70 ಡೋಸ್, ಇನ್ನಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 40 ಡೋಸ್, ನಂದಳಿಕೆಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಡೋಸ್, ಕುಂಟಾಡಿ ಕಲ್ಯಾದ ಬಿಲ್ಲವ ಸಭಾಭವನದಲ್ಲಿ 50 ಡೋಸ್, ಸಚ್ಚರಿಪೇಟೆಯ ಲಯನ್ಸ್ ಶಾಲೆಯಲ್ಲಿ 70 ಡೋಸ್, ಮುನಿಯಾಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 70 ಡೋಸ್ ಲಸಿಕೆ ಲಭ್ಯವಿರಲಿದೆ. ಹಾಗೂ 18-44 ವರ್ಷದ ರಾಜ್ಯ ಸೂಚಿಸಿರುವ ಅದ್ಯತಾ ಗುಂಪಿನ ನಾಗರಿಕರಿಗೆ ಕಾರ್ಕಳ ತಾಲೂಕಿನ ಎಲ್ಲಾ ಆರೋಗ್ಯಕೇಂದ್ರಗಳಲ್ಲಿ ಲಸಿಕ ಲಭ್ಯವಿರಲಿದೆ. ಈ ಶಿಬಿರಗಳಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರು, ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆಯನ್ನು ಹಾಗೂ ಮೊದಲನೇ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನಗಳು ಕಳೆದ ಫಲಾನುಭವಿಗಳು ತಮ್ಮ ಎರಡನೆ ಡೋಸ್ ಲಸಿಕೆ ಪಡೆಯಬಹುದಾಗಿದೆ. ಲಸಿಕೆಯನ್ನು ಪಡೆಯಲು ಸಾರ್ವಜನಿಕರು ಗುರುತಿನ ಚೀಟಿ ತರುವುದು ಕಡ್ಡಾಯ ವಾಗಿದೆ ಎಂದು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
| |