| ಉಡುಪಿ ಜೂ.13(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದುದರ ಪರಿಣಾಮವಾಗಿ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 223 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 105, ಕುಂದಾಪುರ 61, ಕಾರ್ಕಳ 51 ಹಾಗೂ ಹೊರ ಜಿಲ್ಲೆಯ 6 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3222 ಕೋವಿಡ್ ಸಕ್ರಿಯ ಪ್ರಕರಣ ಗಳಿವೆ.
ಇಂದು ಜಿಲ್ಲೆಯಲ್ಲಿ ಉಡುಪಿಯ ಇಬ್ಬರು ಮಹಿಳೆಯರು ಮತ್ತು ಕುಂದಾಪುರದ ಓರ್ವ ಮಹಿಳೆ ಮತ್ತು ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.12 ರಂದು ಜಿಲ್ಲೆಯಲ್ಲಿ 345 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 37,274 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 64,277 ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 60695 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
2ನೇ ಅಲೆಯಲ್ಲಿ ಜೂ.12 ರ ವೇಳೆಗೆ ಜಿಲ್ಲೆಯಲ್ಲಿ 2,70,912 ಯನ್ನು ಕೋವಿಡ್ ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 37,274 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 170 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 5 ಹಾಗೂ ಹೊರ ಜಿಲ್ಲೆಯ 14 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 14 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 23 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| |