ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ನಿಧನ

ಬೆಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್(38) ಅವರು ಸೋಮವಾರ ನಿಧನರಾದರು.

ಜೆ.ಪಿ. ನಗರದ 7ನೇ ಹಂತದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊನ್ನೆ ಮಧ್ಯರಾತ್ರಿ ಸುಮಾರಿಗೆ ಆಸ್ಪತ್ರೆಗೆ ಅವರನ್ನು ಕರೆತಂದಾಗ ಸಂಪೂರ್ಣ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದರು. ಉಸಿರಾಡುತ್ತಿದ್ದ ಕಾರಣ ಸಿಟಿ ಸ್ಕ್ಯಾನ್ ಮಾಡಿ ನೋಡಿದಾಗ ಮೆದುಳಿನ ಬಲಭಾಗಕ್ಕೆ ತೀವ್ರ ಏಟಾಗಿತ್ತು. ಮೆದುಳಿನ ಒಳಗೆ ರಕ್ತಸ್ರಾವವಾಗುತ್ತಿತ್ತು. ಮೆದುಳಿನ ಎರಡೂ ಭಾಗಕ್ಕೆ ಹೊಡೆತ ಬಿದ್ದು, ರಕ್ತ ಹೆಪ್ಪುಗಟ್ಟಿತ್ತು. ಮೆದುಳು ನಿಷ್ಕ್ರಿಯಗೊಂಡ ಪರಿಣಾಮ ಸಂಚಾರಿ ವಿಜಯ್‌ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. 

Leave a Reply

Your email address will not be published. Required fields are marked *

error: Content is protected !!