ಬ್ರಹ್ಮಾವರ: ಬ್ಲಾಕ್ ಕಾಂಗ್ರೆಸ್ ಡಿಜಿಟಲ್ ಯೂತ್ ಪೂರ್ವಭಾವಿ ಸಭೆ
ಬ್ರಹ್ಮಾವರ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ, ಬ್ಲಾಕ್ ಮಟ್ಟದಲ್ಲಿ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ‘ಪ್ರತಿಜ್ಞೆ’ ಕಾರ್ಯಕ್ರಮ ಯಶಸ್ವಿಗೊಳಿಸಲು ಪಣ ತೊಟ್ಟಿದೆ. ಇಂದು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಿಜಿಟಲ್ ಯೂತ್ ಸದಸ್ಯರ ಪೂರ್ವಭಾವಿ ಸಭೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗತ ವೈಭವಕ್ಕೆ ಮತ್ತೆ ದಿನಗಣನೆ ಆರಂಭವಾಗಿದೆ. ಕಾರ್ಯಕರ್ತರನ್ನು ಒಗ್ಗೂಡಿಸುವ ನಾಯಕ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಪ್ರತಿಜ್ಞೆ ಕಾರ್ಯಕ್ರಮವನ್ನು ಐತಿಹಾಸಿಕ ಮಾಡಲು ಡಿಜಿಟಲ್ ಯೂತ್ ಕಾರ್ಯಕರ್ತರು ಉತ್ಸಾಹದಿಂದ ಸೇವೆ ಸಲ್ಲಿಸಬೇಕಾಗಿದೆ. ಪಕ್ಷದಿಂದ ದೂರ ಇದ್ದಂತಹ ಯುವ ಕಾರ್ಯಕರ್ತರು ಮತ್ತೆ ಕಾಂಗ್ರೆಸ್ ಪಕ್ಷದತ್ತ ಆಕರ್ಷಣೆ ಯಾಗುತ್ತಿರುವುದು ನಿಜಕ್ಕೂ ಶಾಘ್ಲನೀಯ ಎಂದು ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ ಡಿಜಿಟಲ್ ಯೂತ್ ಕಾರ್ಯಕರ್ತರನ್ನು ಹುರಿದುಂಬಿಸಿದರು. ಪ್ರತಿಜ್ಞೆ ಕಾರ್ಯಕ್ರಮವನ್ನು ಯಾವ ರೀತಿ ಹಳ್ಳಿ ಹಳ್ಳಿ ಕಡೆಗೆ ತಲುಪಿಸಬೇಕು ಮತ್ತು ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡುವ ರೂಪುರೇಷೆಯ ಮಾಹಿತಿಯನ್ನು ಹಿರಿಯ ನಾಯಕಿ ಕೆಪಿಸಿಸಿ ಕಾರ್ಯದರ್ಶಿ ವೆರೋನಿಕ ಕರ್ನೇಲಿಯೊ ಡಿಜಿಟಲ್ ಯುತ್ ಕಾರ್ಯಕರ್ತರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಯು.ಆರ್ ಸಭಾಪತಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಮುಖಂಡರಾದ ನಿತ್ಯಾನಂದ ಕೆಮ್ಮಣ್ಣು, ಸೂರ್ಯ ಸಾಲ್ಯಾನ್, ಪ್ರಶಾಂತ್ ಸುವರ್ಣ, ರಮೇಶ್ ಕರ್ಕೇರ, ಸತೀಶ್ ಉಪ್ಪೂರು, ತಾಜುದ್ದೀನ್, ಯುವ ಮುಖಂಡರಾದ ರಾಘವೇಂದ್ರ ಶೆಟ್ಟಿ ವಿಘ್ನೇಶ್ ಶೆಟ್ಟಿ ಮತ್ತು ಡಿಜಿಟಲ್ ಯತ್ನ ಹಲವಾರು ಸದಸ್ಯರು ಉಪಸ್ಥಿತರಿದ್ದರು. |