ಉಡುಪಿ ಜೂ.14(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕ ರಿಗೆ ನಾಳೆ ಲಭ್ಯವಿರುವ ಕೋವಿಡ್ ಲಸಿಕೆಯ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂ.15 ರಂದು ಲಸಿಕೆ ಪಡೆಯುವವರು ಮಧ್ಯಾಹ್ನ1.30 ರಿಂದ ಸಂಜೆ 4 ಗಂಟೆವರೆಗೆ ತಮಗೆ ಸೂಚಿಸಿದ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ ಹಾಗೂ ನಾಳೆ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಉಳಿದಂತೆ, ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ ಪಡೆಯುವ 45 ಮೇಲ್ಪಟ್ಟ ಸಾರ್ವಜನಿಕರಿಗೆ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) 150 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 100 ಡೋಸ್ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ 150 ಡೋಸ್ ಲಸಿಕೆ ಲಭ್ಯವಿದ್ದು, ಜೂ.25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಮೀರಿದ ವರಿಗೆ ಮಾತ್ರ ಕೋವಿಶೀಲ್ಡ್ 2 ನೇ ಡೋಸ್ ಹಾಗೂ ಕೋವ್ಯಾಕ್ಸಿನ್ 2 ನೇ ಡೋಸ್ ನೀಡಲಾಗುತ್ತದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ 400 ಡೋಸ್ ಲಸಿಕೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ 100 ಡೋಸ್ ಲಭ್ಯವಿದ್ದು ಮೊದಲ ಮತ್ತು 2 ನೇ ಡೋಸ್ ನೀಡಲಾಗುತ್ತದೆ.
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 50 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು ಮೊದಲ ಮತ್ತು 2ನೇ ಡೋಸ್ ನೀಡಲಾಗುತ್ತದೆ. ಹಾಗೂ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ 50 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 100 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು ಮೊದಲ ಮತ್ತು 2ನೇ ಡೋಸ್ ನೀಡಲಾಗುತ್ತದೆ. ಹಾಗೂ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು /ದುರ್ಬಲ ಗುಂಪಿನ ಫಲಾನುಭವಿಗಳಿಗೆ 100 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾಕಾರ್ಯ ಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ನಾಳೆ ಅಂದರೆ ಜೂ.15 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 4 ವಾರ ( 28 ದಿನಗಳು) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. | | |