ಉಡುಪಿ ಜೂ.14(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಷ್ಟು ದಿನ 200ಕ್ಕಿಂತ ಅಧಿಕ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಂದು 150 ಕ್ಕಿಂತ ಕಡಿಮೆ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇಂದು 123 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 66, ಕುಂದಾಪುರ 43, ಕಾರ್ಕಳ 11 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2883ಕ್ಕೆ ಇಳಿದಿದೆ.
ಇಂದು ಜಿಲ್ಲೆಯಲ್ಲಿ ಉಡುಪಿಯ 53 ವರ್ಷದ ಓರ್ವ ವ್ಯಕ್ತಿ ಹಾಗೂ 75 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಜೂ.13ರಂದು ಜಿಲ್ಲೆಯಲ್ಲಿ 460 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 37,734 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 64,400 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 61,155 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಜೂ.13 ರ ವೇಳೆಗೆ ಜಿಲ್ಲೆಯಲ್ಲಿ 2,69,341 ಯನ್ನು ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 40,789 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 172 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 14 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 15ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 24 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| | |