ಮೇ 25 ರಿಂದ ದೇಶಿಯವಾಗಿ ವಿಮಾನ ಸಂಚಾರಕ್ಕೆ ಅನುಮತಿ
ನವದೆಹಲಿ: ಮುಂದಿನ ವಾರದಲ್ಲಿ ದೇಶಿಯ ವಿಮಾನ ಸಂಚಾರ ಆರಂಭವಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಬುಧವಾರ ತಿಳಿಸಿದೆ.
ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸಿ ಮೇ 25(ಸೋಮವಾರ)ರಿಂದ ದೇಶಿಯವಾಗಿ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಘೋಷಿಸಿದೆ.
ಈ ಕುರಿತು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಂದೇಶ ರವಾನಿಸಲಾಗಿದೆ, ಮೇ.25ರಿಂದ ವಿಮಾನ ಹಾರಾಟ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್ಡೌನ್ ವಿಧಿಸಲಾಗಿತ್ತು. ಇದರ ಪರಿಣಾಮವಾಗಿ ದೇಶಿಯ, ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ದೇಶಿಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ವಿಮಾನಯಾನ ಸಚಿವಾಲಯ ಸ್ಪಷ್ಟಪಡಿಸಿದೆ.