ಉಡುಪಿ ಮಹಾಲಕ್ಷ್ಮೀ ಕೋ.ಆ.ಬ್ಯಾಂಕ್: 295 ಆಶಾ ಕಾರ್ಯಕರ್ತರಿಗೆ 3ಲಕ್ಷ ರೂ. ಗೌರವ ಧನ ವಿತರಣೆ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಸುಮಾರು 3 ಲಕ್ಷ ವೆಚ್ಚದಲ್ಲಿ ಕಾಪು ಹಾಗೂ ಉಡುಪಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ 295 ಆಶಾ ಕಾರ್ಯಕರ್ತರಿಗೆ ಗೌರವ ಧನ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ, ಕೊರೋನಾ ಮಹಾಮಾರಿಯ ಕಠಿಣ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತರು ತಮ್ಮ ಜೀವದ ಹಂಗು ತೊರೆದು ಮನೆ ಮನೆಗೆ ತೆರಳಿ ಸೇವೆ ಸಲ್ಲಿಸಿದ್ದಾರೆ. ಕೊರೋನಾ ರೋಗದ ಬಗ್ಗೆ ಜನಜಾಗೃತಿ ಮೂಡಿಸುವುದರ ಜೊತೆಗೆ ಕೊರೋನಾ ಪೀಡಿತರಿಗೆ ಮಾನಸಿಕ ಸ್ಥೈರ್ಯ ತುಂಬಿದ ಆಶಾ ಕಾರ್ಯಕರ್ತರ ಸೇವೆ ಅಭಿನಂದನೀಯ ಎಂದು ತಿಳಿಸಿದರು.
ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಮೂಡಬೆಟ್ಟು, ಕಾಪು, ಶಿರ್ವ, ಪಡುಬಿದ್ರಿ, ಮುದರಂಗಡಿ, ಹಿರಿಯಡ್ಕ, ಕುಕ್ಕೆಹಳ್ಳಿ, ಹಿರೇಬೆಟ್ಟು, ಪೆರ್ಣಂಕಿಲ, ಮಣಿಪುರ, ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತರಿಗೆ ಚೆಕ್ ವಿತರಿಸಲಾಗಿದ್ದು, ಮಲ್ಪೆ, ಕೆಮ್ಮಣ್ಣು, ಉಡುಪಿ ನಗರ, ಮಣಿಪಾಲ ಹಾಗೂ ಕೋಡಿಬೆಂಗ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತರಿಗೆ ಶೀಘ್ರದಲ್ಲೇ ವಿತರಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಶಶಿಕಾಂತ್ ಪಡುಬಿದ್ರೆ, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ನಿರ್ದೇಶಕರಾದ ವಾಸುದೇವ ಸಾಲ್ಯಾನ್, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಭೈರಂಪಳ್ಳಿ ಗ್ರಾ.ಪಂ. ಅಧ್ಯಕ್ಷ ಜಿಯಾನಂದ ಹೆಗ್ಡೆ, ಕುಕ್ಕೆಹಳ್ಳಿ ಗ್ರಾ.ಪಂ. ಅಧ್ಯಕ್ಷ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾ.ಪಂ ಅಧ್ಯಕ್ಷ ದೇವು ಪೂಜಾರಿ, ಆತ್ರಾಡಿ ಗ್ರಾ.ಪಂ ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಫಲಿಮಾರು ಗ್ರಾ.ಪಂ ಅಧ್ಯಕ್ಷೆ ಗಾಯತ್ರಿ ಪ್ರಭು, ಮುದರಂಗಡಿ ಗ್ರಾ.ಪಂ ಅಧ್ಯಕ್ಷೆ ಯೋಗಿನಿ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ ಬಡಗಬೆಟ್ಟು, ಪ್ರವೀಣ್ ಪೂಜಾರಿ ಶಿರ್ವ, ಶಿವರಾಮ ಭಂಡಾರಿ ಮುದರಂಗಡಿ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ಕುತ್ಯಾರು, ಹಿಂದೂ ಯುವಸೇನೆ ಹಿರಿಯಡ್ಕ ಶಾಖೆ ಅಧ್ಯಕ್ಷ ಶೇಖರ ಶೆಟ್ಟಿ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಜಿ.ಕೆ ಶೀನಾ ಮೊದಲಾದವರು ಉಪಸ್ಥಿತರಿದ್ದರು.