| ಉಡುಪಿ ಜೂ.15(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ನಾಳೆ (ಜೂ.16) ಲಭ್ಯವಿರುವ ಕೋವಿಡ್ ಲಸಿಕೆಯ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಳೆ ಅಂದರೆ ಜೂ.16 ರಂದು ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ,ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ 100 ಡೋಸ್ ಕೋವಿಶೀಲ್ಡ್ ಲಭ್ಯವಿದ್ದು, ಜೂ.25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿ ಶೀಲ್ಡ್ ಮೊದಲ ಡೋಸ್ ಪಡೆದು 28 ದಿನ ಮೀರಿದ ವರಿಗೆ ಮಾತ್ರ ಕೋವಿಶೀಲ್ಡ್ 2ನೇ ಡೋಸ್ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುತ್ತದೆ.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 150 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯ ವಿದ್ದು, ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 4 ವಾರ (28) ದಿನ ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಹತ್ತಿರ) 150 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 4 ವಾರ (28) ದಿನ ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರ/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾಕಾರ್ಯ ಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ನಾಳೆ ಅಂದರೆ ಜೂ.16 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ. | |