ಉಡುಪಿ ಜೂ.15(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 107 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 50, ಕುಂದಾಪುರ 39, ಕಾರ್ಕಳ 17 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2683 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಕುಂದಾಪುರದ 94 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.14 ರಂದು ಜಿಲ್ಲೆಯಲ್ಲಿ 306 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 38,040 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 64,507 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 61,461 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಜೂ.13 ರ ವೇಳೆಗೆ ಜಿಲ್ಲೆಯಲ್ಲಿ 2,71,437ಯನ್ನು ಕೋವಿಡ್ ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 40,896 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 173 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 15 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 15 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 25 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| | |
This is Sunday reports