ಬ್ರಹ್ಮಾವರ: ವ್ಯಕ್ತಿ ನಾಪತ್ತೆ
ಬ್ರಹ್ಮಾವರ ಜೂ.16: ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದಲ್ಲಿ ನಡೆದಿದೆ. ನಾರಾಯಣ ನಾಯಕ್ (45) ನಾಪತ್ತೆಯಾದವರು. ಇವರು, ಮಾನಸಿಕ ರೋಗಿಯಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಗುಣಮುಖರಾಗಿರುವುದಿಲ್ಲ.
ಅವರು ಬ್ರಹ್ಮಾವರ ಆಸುಪಾಸಿನ ಹೊಟೇಲ್ ಹಾಗೂ ಹಣ್ಣಿನ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದು, ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದಾರೆ. ಇತ್ತೀಚೆಗೆ ಲಾಕ್‌ಡೌನ್ ಸಮಯದಲ್ಲಿ ಬೆಳಗ್ಗೆ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬರುತ್ತಿದ್ದರು, ಅದರಂತೆ ಜೂ.14 ರಂದು ಮಧ್ಯಾಹ್ನ ಮನೆಯಿಂದ ಹೋಗಿದ್ದ ನಾರಾಯಣ ನಾಯಕ್ ಮನೆಗೆ ವಾಪಾಸ್ಸು ಬಾರದೆ ಕಾಣೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.