ಉಡುಪಿ: ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ
ಉಡುಪಿ ಜೂ.16(ಉಡುಪಿ ಟೈಮ್ಸ್ ವರದಿ): ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ- 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್‌ನ 2ನೇ ಡೋಸ್ ಲಸಿಕಾಕರಣಕ್ಕಾಗಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ರವೀಂದ್ರ ಮೊ.ನಂ-8660523556 ಇವರನ್ನು, ನಗರದ ಡಾ. ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.