ಉಡುಪಿ ಜೂ.16(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 159 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 58, ಕುಂದಾಪುರ 47, ಕಾರ್ಕಳ 50 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2468 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಉಡುಪಿಯ 75 ವರ್ಷದ ಓರ್ವ ಮಹಿಳೆ ಹಾಗೂ ಕಾರ್ಕಳ ದ 89 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.15ರಂದು ಜಿಲ್ಲೆಯಲ್ಲಿ 372 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ 38,412 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 64,666 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 61,833 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಜೂ.15ರ ವೇಳೆಗೆ ಜಿಲ್ಲೆಯಲ್ಲಿ 2,74,795ಯನ್ನು ಕೋವಿಡ್ ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 41,055 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 175 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ 7 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 15 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 16ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 25 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
| | |