ರಾಜ್ಯಕ್ಕೆ ಸುಭದ್ರ ಸರ್ಕಾರ ಬೇಕು, ಯಡಿಯೂರಪ್ಪನವರನ್ನು ಇಟ್ಕೊಳ್ತೀರ, ಕಿತ್ತು ಹಾಕ್ತೀರಾ, ಬೇಗ ನಿರ್ಧಾರ ಮಾಡಿ: ಸಿದ್ದರಾಮಯ್ಯ
ಬೆಂಗಳೂರು: ಕೊರೋನಾ ಎರಡನೇ ಅಲೆಗೆ ತೀವ್ರವಾಗಿ ಸಿಲುಕಿ ಜನರು ಪರಿತಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆಯಿದೆ.ಸರ್ಕಾರ ಈ ಸಮಯದಲ್ಲಿ ಜನರ ಪರವಾಗಿ ಗಟ್ಟಿಯಾಗಿ ನಿಲ್ಲಬೇಕು. ಅದು ಬಿಟ್ಟು ಬಿಜೆಪಿ ನಾಯಕರು ತಮ್ಮ ತಮ್ಮೊಳಗೆ ಗುಂಪು ರಾಜಕೀಯ ಮಾಡುವುದು, ಅಧಿಕಾರಕ್ಕಾಗಿ ಕಿತ್ತಾಟ ನಡೆಸುವುದು, ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಎಷ್ಟು ಸರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯ ಇದೆ. @BSYBJP ಅವರನ್ನು ಇಟ್ಟುಕೊಳ್ತಿರಾ? ಕಿತ್ತುಹಾಕ್ತೀರಾ? @BJP4Karnataka ಸಂಬಂಧಿಸಿದ ವಿಚಾರ. ಶೀಘ್ರ ನಿರ್ಧಾರಕ್ಕೆ ಬಂದು ರಾಜ್ಯಕ್ಕೊಂದು ಸುಭದ್ರವಾದ ಸರ್ಕಾರ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿಹೋಗಿ.
ರಾಜ್ಯ ಬಿಜೆಪಿ ನಾಯಕರೊಳಗಿನ ಬಹಿರಂಗ ಕಿತ್ತಾಟವನ್ನು ಶಮನಗೊಳಿಸಲು ಇದೀಗ ಸ್ವತಃ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಂದಿದ್ದಾರೆ. ಈ ಹೊತ್ತಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪರನ್ನು ಇಟ್ಟುಕೊಳ್ತೀರಾ ಕಿತ್ತುಹಾಕ್ತೀರಾ? ಇದು ಬಿಜೆಪಿಗೆ ಸಂಬಂಧಿಸಿದ ವಿಚಾರ. ಆದರೆ, ಶೀಘ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಿ ಎಂದು ಹೇಳಿದ್ದಾರೆ.
ಶೀಘ್ರ ನಿರ್ಧಾರಕ್ಕೆ ಬಂದು ರಾಜ್ಯಕ್ಕೊಂದು ಸುಭದ್ರ ಸರ್ಕಾರ ಕೊಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ. ಪಕ್ಷಾಂತರಿಗಳ ಅನೈತಿಕ ಬಲದಿಂದ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಅನುಭವಿಸುತ್ತಿದೆ. ಮೂಲ ನಾಯಕರು ಈಗ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಇಂಥ ಅನೈತಿಕ ಬೆಂಬಲ ಬೇಡವಾದ್ರೆ. ಪಕ್ಷಾಂತರಿಗಳನ್ನು ಕಿತ್ತು ಹಾಕಿ, ಯಾಕೆ ಗೋಳಾಡುತ್ತೀರಿ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ