ಉದ್ಯಾವರ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಉದ್ಯಾವರ: (ಉಡುಪಿ ಟೈಮ್ಸ್ ವರದಿ) ಇಲ್ಲಿನ ಪಂಚಾಯತ್ ಸದಸ್ಯನ ತಾಯಿ ನೇಣಿಗೆ ಶರಣಾಗಿರುವ ಘಟನೆ ಪಿತ್ರೋಡಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಪಿತ್ರೋಡಿ ನಿವಾಸಿ ಸುಕನ್ಯ(52) ಎಂಬವರು ನೇಣಿಗೆ ಶರಣಾದ ಮಹಿಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದ್ದರೂ ಅದಾಗಲೇ ಅಸುನೀಗಿದ್ದಾರೆ ಎನ್ನಲಾಗಿದೆ.
ಉದ್ಯಾವರ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಯುವಕ ಮಂಡಲದ ಅಧ್ಯಕ್ಷ ಚೇತನ್ ಕುಮಾರ್ ಸಹಿತ 2ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತ ದೇಹ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಕಾಪು ಠಾಣೆಯಲ್ಲಿ ಕೇಸು ದಾಖಲಾಗಿದೆ.