ಉಡುಪಿ: 162 ಮಂದಿಯಲ್ಲಿ ಪಾಸಿಟಿವ್- ಕಾರ್ಕಳದ 76 ವರ್ಷದ ಮಹಿಳೆ ಮೃತ್ಯು

ಉಡುಪಿ ಜೂ.17(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಆದರೂ ಜಿಲ್ಲೆಯ ಜನತೆ ನಿರ್ಲಕ್ಷ್ಯ ವಹಿಸದೇ ಜಾಗರೂಕರಾಗಿರುವುದು ಅವಶ್ಯಕವಾಗಿದೆ.

ಜಿಲ್ಲೆಯಲ್ಲಿ ಇಂದು 162 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 52, ಕುಂದಾಪುರ 42, ಕಾರ್ಕಳ 61 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 2312 ಕ್ಕೆ ಇಳಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಕಾರ್ಕಳದ 76 ವರ್ಷದ ಓರ್ವ ಮಹಿಳೆ ಸೋಂಕಿನಿಂದ  ಮೃತಪಟ್ಟಿದ್ದಾರೆ. ಜೂ.16 ರಂದು ಜಿಲ್ಲೆಯಲ್ಲಿ 317 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ  38,729 ಮಂದಿ ಗುಣಮುಖರಾಗಿದ್ದಾರೆ. ಹಾಗೂ  ಜಿಲ್ಲೆಯಲ್ಲಿ  ಒಟ್ಟು ಈವರೆಗೆ ಪತ್ತೆಯಾದ 64,828 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,150 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.

ಕೋವಿಡ್ 2 ನೇ ಅಲೆಯಲ್ಲಿ ಜೂ.16 ರ ವೇಳೆಗೆ ಜಿಲ್ಲೆಯಲ್ಲಿ 2,78,069 ಯನ್ನು ಕೋವಿಡ್ ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 41,217 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2 ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 176 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 6 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 15 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 17 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 25 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!