ಉಡುಪಿ: ಜೂ.19 ರ ಕೋವಿಡ್ ಲಸಿಕೆ ಲಭ್ಯತೆ ಮಾಹಿತಿ
ಉಡುಪಿ, ಜೂ18: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಲಭ್ಯತೆ ಮಾಹಿತಿ
1. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.
ಜೂ.19 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು.
2. ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಬೆಳಿಗ್ಗೆ9.30 ರಿಂದ 4.30 ರ ವರೆಗೆ) ದಿನಾಂಕ 25/06/2021ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)
3. ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) (ಸಮಯ: ಅಪರಾಹ್ನ 1.30. ರಿಂದ 4.30 ರ ವರೆಗೆ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು ೨ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)
4. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) (ಸಮಯ: ಅಪರಾಹ್ನ 1.30ರಿಂದ 4.30ರ ವರೆಗೆ) -(130 ಡೋಸ್ ಲಭ್ಯ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರು(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ) ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ-(100ಡೋಸ್ ಲಭ್ಯ)
5. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್ ಥಿಯೇಟರ್ ಹತ್ತಿರ) (ಸಮಯ: ಅಪರಾಹ್ನ 2 ರಿಂದ 4.30 ರ ವರೆಗೆ) 45 ವರ್ಷ ಮೇಲ್ಪಟ್ಟ ಸಾರ್ವಜನಿಕರು(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)
6 ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) (ಸಮಯ: ಅಪರಾಹ್ನ 1.30 ರಿಂದ 4.30ರ ವರೆಗೆ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (50 ಡೋಸ್ ಲಭ್ಯ)
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂ.19ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.