ಕಳಸ ತಾಲೂಕು ಘೋಷಣೆ- ಸಂಸದೆ ಶೋಭಾ ಕರಂದ್ಲಾಜೆ ಹರ್ಷ

ಚಿಕ್ಕಮಗಳೂರು ಜೂ.18(ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ಕಳಸವನ್ನು ತಾಲೂಕಾಗಿ ಘೋಷಣೆ ಮಾಡಬೇಕು ಎಂಬುದು ಕಳಸ, ಹೊರನಾಡು ಭಾಗದ ಜನರ ಹಲವು ವರುಷಗಳ ಬೇಡಿಕೆಯಾಗಿತ್ತು. ಇದೀಗ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಕಳಸ ಹೊರನಾಡು ಭಾಗದ ಜನರ ಬಹು ಕಾಲದ ಕನಸು ನನಸಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸವನ್ನು ನೂತನ ತಾಲೂಕಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಈ ಭಾಗದ ಜನರ ಬೇಡಿಕೆ ಈಡೇರಿದಂತಾಗಿದೆ. ಈ ಕುರಿತಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು, ಜನರ ಬೇಡಿಕೆಗೆ ಸ್ಪಂದಿಸಿ  ಕಳಸವನ್ನು ತಾಲೂಕಾಗಿ ಘೋಷಣೆ ಮಾಡಿದ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!