ಉಡುಪಿ: ಸಕ್ರಿಯ ಪ್ರಕರಣ 2000 ದತ್ತ- ಮೂವರ ಸಾವು
ಉಡುಪಿ ಜೂ.18(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2000 ದತ್ತ ಇಳಿಮುಖವಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 188 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 90, ಕುಂದಾಪುರ 47, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2167 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು. ಈ ಪೈಕಿ ಉಡುಪಿಯ ಇಬ್ಬರು ಮಹಿಳೆಯರು ಹಾಗೂ ಕುಂದಾಪುರ ದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.17 ರಂದು ಜಿಲ್ಲೆಯಲ್ಲಿ 330 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,059 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,016 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,480 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ಕೋವಿಡ್ 2ನೇ ಅಲೆಯಲ್ಲಿ ಜೂ.17 ರ ವೇಳೆಗೆ ಜಿಲ್ಲೆಯಲ್ಲಿ 2,81,542 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 41,405 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 179 ಮಂದಿ ಸೋಂಕಿಗೆ ಬಲಿಯಾಗಿ ದ್ದಾರೆ. ಇನ್ನು ಜಿಲ್ಲೆಯಲ್ಲಿ 6 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 15 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 17 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 25 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ .