ಉಡುಪಿ: ಜಿಲ್ಲೆಗೆ ಅನ್ ಲಾಕ್ ಘೋಷಿಸಿ- ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗೆ ಮನವಿ

ಉಡುಪಿ ಜೂ.20(ಉಡುಪಿ ಟೈಮ್ಸ್ ವರದಿ): ಜಿಲ್ಲೆಯನ್ನು ಕೋವಿಡ್ ಲಾಕ್ ಡೌನ್ ನಿಂದ ಅನ್ ಲಾಕ್ ಮಾಡುವಂತೆ ಉಡುಪಿ ಶಾಸಕ ರಘುಪತಿ ಭಟ್ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿ ಕೊಂಡಿದ್ದಾರೆ. 

ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಮೂಲಕ ಪಾಸಿಟಿವಿಟಿ ದರ ಕೂಡಾ ಕಡಿವೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, 
ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೊವೀಡ್ ಪರೀಕ್ಷೆ ನಡೆದಿದ್ದು, ಪ್ರಸ್ತುತ ದಿನಕ್ಕೆ 3 ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಅದರಲ್ಲಿ ಶೇ.5.05 ಪಾಸಿಟಿವಿಟಿ ದರ ಇರುವುದರಿಂದ ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡಲು  ಮುಖ್ಯಮಂತ್ರಿಯವರಾದ ಬಿಎಸ್ ಯಡಿಯೂರಪ್ಪ ಅವರಲ್ಲಿ ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದರೊಂದಿಗೆ, ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತಹ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ನೀಡಿದ ಆದೇಶದ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿಯನ್ನು ಸೇರಿಸಿ ಅನ್ ಲಾಕ್ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರೊಂದಿಗೆ ಜಿಲ್ಲೆಯನ್ನು ಅನ್ ಲಾಕ್ ಮಾಡದಿದ್ದಲ್ಲಿ ಎಲ್ಲಾ ವರ್ಗದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿರುವ ಅವರು ಲಾಕ್ ಡೌನ್ ನಿಂದ ಸಣ್ಣ ಪುಟ್ಟ ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ವರ್ಗದ ಜನ ಸಂಕಷ್ಟಕ್ಕೊಳ ಗಾಗಿರುವುದರಿಂದ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಅನ್ ಲಾಕ್ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!