| ಉಡುಪಿ, ಜೂ.20(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ (ಜೂ 21) ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ ಲಸಿಕೆಯ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ನಾಳೆ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ. ಉಳಿದಂತೆ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) ಯಲ್ಲಿ 150 ಡೋಸ್ ಕೋವಿಶೀಲ್ಡ್ ಹಾಗೂ100 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು ಬೆಳಿಗ್ಗೆ 9.30 ರಿಂದ ಸಂಜೆ 4.30ರ ವರೆಗೆ ಲಸಿಕೆ ಪಡೆಯ ಬಹುದಾಗಿದೆ
ದೊಡ್ಡಣಗುಡ್ಡೆ ಜನತಾ ವ್ಯಾಯಾಮ ಶಾಲೆಯಲ್ಲಿ 550 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ರ ವರೆಗೆ ಪಡೆಯಬಹುದು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) ದಲ್ಲಿ 300 ಡೋಸ್ ಕೋವಿಶೀಲ್ಡ್ ಹಾಗೂ 450 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು ಬೆಳಿಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಪಡೆಯ ಬಹುದು
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ (ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹನುಮಂತನಗರ) ಯಲ್ಲಿ 300 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದ್ದು ಬೆಳಿಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಪಡೆಯಬಹುದು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) 200 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು ಬೆಳಿಗ್ಗೆ 9.30 ರಿಂದ ಸಂಜೆ 4.30 ವರಗೆ ಪಡೆಯಬಹುದು ಎಂದು ತಿಳಿಸಿದ್ದಾರೆ.
ಹಾಗೂ ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 150 ಡೋಸ್ ಕೋವಿಶೀಲ್ಡ್ ಹಾಗೂ 30 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು ಬೆಳಿಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಯಲ್ಲಿ 350 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ ಎಂದು ತಿಳಿಸಿದ್ದಾರೆ.
ಇನ್ನು ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್ -19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆಯನ್ನು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆ ಯರನ್ನು ಸಂಪರ್ಕಿಸಿ ಲಸಿಕ ಶಿಬಿರದ ಸ್ಥಳವನ್ನು ಖಚಿತಪಡಿಸಿಕೊಂಡು ಜೂ.21 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ.
| |