ಉಡುಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ನಾಳೆ ಕವಿ ಡಾ.ಸಿದ್ದಲಿಂಗಯ್ಯನವರಿಗೆ ನುಡಿನಮನ
ಉಡುಪಿ: ನಾಳೆ (ಜೂ. 21) ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಎಸ್. ಸಿ. ಮೋರ್ಚಾ ವತಿಯಿಂದ ಇತ್ತೀಚಿಗೆ ನಿಧನರಾದ ಖ್ಯಾತ ದಲಿತ ಕವಿ ಡಾ. ಸಿದ್ದಲಿಂಗಯ್ಯ ನವರಿಗೆ “ನುಡಿನಮನ” ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆಂದು ನಿಕಟಪೂರ್ವ ಜಿ. ಪಂ. ಅಧ್ಯಕ್ಷರು ಹಾಗೂ ರಾಜ್ಯ ಬಿಜೆಪಿ ಎಸ್. ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ