ಉಡುಪಿ ಸರ್ವರಿಗೂ ಸೂರು: 240 ಮನೆಗಳನ್ನು ಲಾಟರಿ ಮೂಲಕ ಫಲಾನುಭವಿಗಳಿಗೆ ಹಂಚಿಕೆ

ಉಡುಪಿ ಜೂ.21(ಉಡುಪಿ ಟೈಮ್ಸ್ ವರದಿ): ಸರ್ವರಿಗೂ ಸೂರು ಕಾರ್ಯಕ್ರಮದಡಿ ಹೆರ್ಗದಲ್ಲಿ ನಿರ್ಮಾಣ ಮಾಡಲಾದ  240 ಮನೆಗಳನ್ನು ಶಾಸಕ ರಘುಪತಿ ಭಟ್ ಉಪಸ್ಥಿತಿಯಲ್ಲಿ ಲಾಟರಿ ಎತ್ತುವ ಮೂಲಕ ಫಲಾನುಭವಿಗಳಿಗೆ ಹಂಚಿಕೆ ಕಾರ್ಯಕ್ರಮ ಇಂದು ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಅವರ ಮಹತ್ವಾಕಾಂಕ್ಷೆಯ ಯೋಜನೆ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸರ್ವರಿಗೂ ಸೂರು ಕಾರ್ಯಕ್ರಮದಡಿ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ವಸತಿ ಸಮುಚ್ಛಯದ 460 ಮನೆಗಳಲ್ಲಿ 240 ಮನೆಗಳನ್ನು ಲಾಟರಿ ಎತ್ತುವ ಮೂಲಕ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಯಿತು. ಈ ವೇಳೆ ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ನೆಲೆಯಡಿ ನೆಲ ಮಹಡಿಯ ಮನೆಗಳನ್ನು ಲಾಟರಿ ಎತ್ತುವ ಮೂಲಕ ಹಂಚಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಳೀಯ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಸಹಾಯಕ ಅಭಿಯಂತರ ಶ್ರೀಪಾದ, ಬ್ಯಾಂಕ್ ಆಫ್ ಬರೋಡಾ ರೀಜನಲ್ ಮ್ಯಾನೇಜರ್ ರವಿಕುಮಾರ್, ಭೀಮ್ ಶಂಕರ್, ಗುತ್ತಿಗೆದಾರ ನಿಹಾಲ್ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!