ತುಳು ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಮ್ಮ ಬೆಂಬಲವಿಲ್ಲ- ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ ಜೂ.21:(ಉಡುಪಿ ಟೈಮ್ಸ್ ವರದಿ) ತುಳು ಭಾಷೆಗೆ ಗೌರವ ಸಿಗಬೇಕು. ಇದಕ್ಕೆ ಹೋರಾಟ ಮಾಡಲಾಗುವುದು. ಆದರೆ ತುಳು ಪ್ರತ್ಯೇಕ ರಾಜ್ಯದ ಬೇಡಿಕೆಗಳಿಗೆ ನಮ್ಮ ಬೆಂಬಲವಿಲ್ಲ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಗೃಹಸಚಿವ ರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಹಾಗೂ ಗೃಹಸಚಿವರಿಗೆ ಮನವರಿಕೆ ಮಾಡಿದ್ದಾರೆ. ಇದಕ್ಕೆ ಕರಾವಳಿ ಭಾಗದ ಜನಪ್ರತಿನಿಧಿಗಳು ಬೆಂಬಲಿಸಿದ್ದೇವೆ. ಆದರೆ ತುಳು ಪ್ರತ್ಯೇಕ ರಾಜ್ಯದ ಕುಚೋದ್ಯದ ಬೇಡಿಕೆಗಳಿಗೆ ನಮ್ಮ ಬೆಂಬಲವಿಲ್ಲ. ಕರ್ನಾಟಕ ಏಕೀಕರಣದಿಂದ ನಾವೆಲ್ಲಾ ಒಟ್ಟಾಗಿದ್ದೇವೆ. ತುಳು ರಾಜ್ಯ ರಚನೆ ಪ್ರಸ್ತಾವ ಬೆಂಬಲಿಸಿದರೆ ಮಹಾರಾಷ್ಟ್ರ ಇದನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಪ್ರತ್ಯೇಕ ರಾಜ್ಯಕ್ಕೆ ಬೆಂಬಲ ನೀಡಲಾಗುವುದಿಲ್ಲ ಎಂದರು.