| ಉಡುಪಿ ಜೂ.21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ನಾಳೆ(ಜೂ.22)ಕೊರೋನಾ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಭ್ಯವಿರುವ ಕೋವಿಡ್ ಲಸಿಕೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಅದರಂತೆ ಜಿಲ್ಲೆಯಲ್ಲಿ ನಾಳೆ ಅಂದರೆ ಜೂ.22 ರಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) 70 ಡೋಸ್ ಕೋವಿಶೀಲ್ಡ್ ಹಾಗೂ 150 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು ರಾಜ್ಯ ಸರಕಾರ ಗುರುತಿಸಿರುವ ಕೊರೋನಾ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನ ವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಮಧ್ಯಾಹ್ನ 1.30 ರಿಂದ 4.30 ರ ವರೆಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆಯನ್ನು ನೀಡಲಾಗುತ್ತದೆ.
ಎಫ್.ಪಿ.ಎ.ಐ ಕುಕ್ಕಿಕಟ್ಟೆ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) ಯಲ್ಲಿ 60 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದ್ದು, ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತ ರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿ ಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಯನ್ನು ಬೆಳಿಗ್ಗೆ 1.30 ರಿಂದ4.30 ರ ವರೆಗೆ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಪ್ರಥಮ ಡೋಸ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು/ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂ.22 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ತಿಳಿಸಿದ್ದಾರೆ. | |