ಉಡುಪಿ: 116 ಮಂದಿಯಲ್ಲಿ ಸೋಂಕು- 323 ಮಂದಿ ಗುಣಮುಖ- ಓರ್ವ ಮಹಿಳೆ ಮೃತ್ಯು

ಉಡುಪಿ ಜೂ.21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಜಿಲ್ಲೆಯಲ್ಲಿ ಇಂದು 116 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 53, ಕುಂದಾಪುರ 31, ಕಾರ್ಕಳ 27 ಹಾಗೂ ಹೊರ ಜಿಲ್ಲೆಯ 5 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ  ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1662 ಕ್ಕೆ ಇಳಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಕುಂದಾಪುರದ 63 ವರ್ಷದ ಓರ್ವ ಮಹಿಳೆ ಸೋಂಕಿನಿಂದ  ಮೃತಪಟ್ಟಿದ್ದಾರೆ. ಜೂ. 20 ರಂದು ಜಿಲ್ಲೆಯಲ್ಲಿ 323 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ ಎರಡನೇ ಅಲೆ ಆರಂಭ ಆದಾಗಿನಿಂದ ಈವರೆಗೆ  40016 ಮಂದಿ ಗುಣಮುಖರಾಗಿದ್ದಾರೆ. ಹಾಗೂ  ಜಿಲ್ಲೆಯಲ್ಲಿ ಒಟ್ಟು ಈ ವರೆಗೆ ಪತ್ತೆಯಾದ 65,472 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 63,437 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜೂ.20 ರ ವೇಳೆಗೆ ಜಿಲ್ಲೆಯಲ್ಲಿ 2, 90,311ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 41,861 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 183 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ 4 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರದಲ್ಲಿ 6 ಹಾಗೂ ಹೊರ ಜಿಲ್ಲೆಯ 16ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ  ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 20 ಮಂದಿ ಸೋಂಕಿನಿಂದ  ಗುಣ  ಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 26 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!